BIG NEWS : ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರದಿಂದ ದಿಟ್ಟ ಕ್ರಮ : ಸಿಎಂ ಸಿದ್ದರಾಮಯ್ಯ ಮಾಹಿತಿ

ಬೆಂಗಳೂರು : ವಿದ್ಯುತ್ ಕೊರತೆ ನೀಗಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಉತ್ಪಾದನೆ ಕಡಿಮೆಯಿದ್ದು, ಬೇಡಿಕೆ ಹೆಚ್ಚಿರುವುದರಿಂದ ಅನಿವಾರ್ಯವಾಗಿ ತಾತ್ಕಾಲಿಕ ಒಡಂಬಡಿಕೆಯ ಮೇರೆಗೆ ಹೊರ ರಾಜ್ಯಗಳಿಂದ ವಿದ್ಯುತ್ ಖರೀದಿಗೆ ನಾವು ಮುಂದಾಗಿದ್ದೇವೆ. ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ನವೀಕರಿಸಬಹುದಾದ ಇಂಧನ ಮೂಲಗಳ ಪರಿಣಾಮಕಾರಿ ಬಳಕೆಯ ಮೂಲಕ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ಕಡೆಗೂ ಗಮನ ಹರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರ್ಕಾರದ ದಿಟ್ಟ ಕ್ರಮಗಳು

1) ರೈತರಿಗೆ ಮೂರು ಸಾಳಿಯಲ್ಲಿ ನಿರಂತರ 5 ಗಂಟೆಗಳ ವಿದ್ಯುತ್ ಪೂರೈಕೆಗೆ ಸೂಚನೆ
2) ಉತ್ತರ ಪ್ರದೇಶದಿಂದ 100 ಮೆ.ವ್ಯಾ ಮತ್ತು ಸಂಜಾಬ್ನಿಂದ 600 ಮೆ.ನ್ಯಾ ವಿದ್ಯುತ್ ಖರೀದಿಗೆ ಸೂಚನೆ
3) ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಜಾರಿ, ರಾಜ್ಯದ ಎಲ್ಲಾ ವಿದ್ಯುತ್ ಉತ್ಪಾದನಾ ಘಟಕಗಳು ಗರಿಷ್ಠ ವಿದ್ಯುತ್ ಉತ್ಪಾದಿಸಿ ರಾಜ್ಯದ ಗ್ರಿಡ್ ಗೆ ಪೂರೈಸುವಂತೆ ಆದೇಶ
4) ರಾಜ್ಯದ ಶಾಖೋತ್ಪನ್ನ ವಿದ್ಯುತ್ ಘಟಕಗಳಿಗೆ ಮರುಚಾಲನೆ
5) ಈ ಎಲ್ಲಾ ಕಲ್ಲಿದ್ದಲು ಸಂಸ್ಥೆಗಳಿಂದ 15 ಲಕ್ಷ ಮೆಟ್ರಿಕ್ ಟನ್ ಪಡೆಯಲು ಕ್ರಮ
6) ಅಲ್ಪಾವಧಿ ಆಧಾರದಲ್ಲಿ 1300 ಮೆ.ವ್ಯಾ ವಿದ್ಯುತ್ ಖರೀದಿಗೆ ಕ್ರಮ
7) ಕೆಪಿಸಿಎಲ್ ನ ಆನಿಲ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಾರ್ಯಾಚರಣೆ ಆರಂಭಕ್ಕೆ ಕ್ರಮ
8) ಸಾವಗಡದಲ್ಲಿ ಹೆಚ್ಚುವರಿಯಾಗಿ 300 ಮೆ.ವ್ಯಾ ಮತ್ತು ಕಲಬುರಗಿಯಲ್ಲಿ 500 ಮೆ.ವ್ಯಾ ಸೋಲಾರ್ ಪಾರ್ಕ್ ಸ್ಥಾಪನೆ
9) ಛತ್ತೀಸ್ ಗಡದಲ್ಲಿ ಖಾಸಗಿ / ಜಂಟಿ ಹೂಡಿಕೆಯಡಿ ಕ್ಯಾಪ್ಟಿವ್ ಕಲ್ಲಿದ್ದಲು ಗಣಿ ಆರಂಭಕ್ಕೆ ಕ್ರಮ
10) ಇತರ ರಾಜ್ಯಗಳಲ್ಲಿನ Stressed out ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಖರೀದಿಸಲು ಪ್ರಸ್ತಾಪ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read