ಕೊಲ್ಕತ್ತಾ: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರನ್ನು ಶನಿವಾರ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಮಿಥುನ್ ಚಕ್ರವರ್ತಿ ಅವರನ್ನು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅವರು ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಶೂಟಿಂಗ್ ಪುನರಾರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ವಾಸ್ತವವಾಗಿ ಯಾವುದೇ ಸಮಸ್ಯೆ ಇಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಎಂದು ನಟ ಮಿಥುನ್ ಚಕ್ರವರ್ತಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.