ಮೆದುಳಿನ ಸ್ಟ್ರೋಕ್ ಗೆ ತುತ್ತಾಗಿ ಕೋಲ್ಕತ್ತಾ ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.
ಮಿಥುನ್ ಚಕ್ರವರ್ತಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಹಿನ್ನೆಲೆ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಅವರು ಡಿಸ್ಚಾರ್ಜ್ ಆಗಲಿದ್ದು, ನಂತರ ಶೂಟಿಂಗ್ ಮರಳಲಿದ್ದಾರೆ ಎಂದು ಬಂಗಾಳಿ ನಟಿ ದೇಬಶ್ರೀ ರಾಯ್ ತಿಳಿಸಿದ್ದಾರೆ.