alex Certify BREAKING: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 6 ಜನರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 6 ಜನರು ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿಯಲ್ಲಿ ತೊಡಗಿದ್ದ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ 6 ಜನರನ್ನು ಹಲಸೂರು ಠಾಣೆ ಪೊಲಿಸರು ಬಂಧಿಸಿದ್ದಾರೆ.

ಬೆಂಗಳೂರಿನ ಎಂ.ಜಿ ರಸ್ತೆಯಲ್ಲಿನ ದಿ ಪಾರ್ಕ್ ಹೋಟೆಲ್ ಮೇಲೆ ತಡ ರಾತ್ರಿ ದಾಳಿ ನಡೆಸಿದ್ದ ಪೊಲೀಸರು, ಡ್ರಗ್ಸ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ಬಾಲಿವುಡ್ ನಟಿ ಶ್ರದ್ಧಾ ಕಪೂರ್ ಸಹೋದರ ನಟ ಸಿದ್ಧಾಂತ್ ಕಪೂರ್ ಸೇರಿದಂತೆ ಹಲವು ಯುವತಿಯರು ಸೇರಿ 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದರು. ವಶಕ್ಕೆ ಪಡೆದವರನ್ನು ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗಿತ್ತು.

BIG NEWS: ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆ; ಮತ್ತೆ ನೀತಿ ಸಂಹಿತೆ ಉಲ್ಲಂಘಿಸಿದ ಬಿಜೆಪಿ ಶಾಸಕ

ಇದೀಗ ಮೆಡಿಕಲ್ ಟೆಸ್ಟ್ ವರದಿ ಬಂದಿದ್ದು, ನಟ ಸಿದ್ಧಾಂತ್ ಕಪೂರ್ ಡ್ರಗ್ಸ್ ಸೇವಿಸಿದ್ದು ದೃಢಪಟ್ಟಿದೆ. ಅಲ್ಲದೇ ಪಾರ್ಟಿಯಲ್ಲಿ ಭಾಗಿಯಾಗಿದ್ದ ಇನ್ನೂ ಐವರು ಡ್ರಗ್ಸ್ ಸೇವಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಸಿದ್ಧಾಂತ್ ಕಪೂರ್, ಅಖಿಲ್ ಸೋನಿ, ಹನಿ, ದರ್ಶನ್ ಸುರೇಶ್, ಅರ್ಜೋತ್ ಸಿಂಗ್ ಹಾಗೂ ಅಕಿಲ್ ಸೇರಿದಂತೆ 6 ಜನರನ್ನು ಹಲಸೂರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...