ಬೆಂಗಳೂರು: ವಿಧಾನಸೌಧಕ್ಕೆ ಬಾಂಬ್ ಬೆದರಿಕೆಯೊಡ್ಡಿದ್ದ ಆರೋಪಿಯನ್ನು ಬೆಂಗಳೂರು ಕೇಂದ್ರ ವಿಭಾಗ ಪೊಲೀಸರು ಬಂಧಿಸಿದ್ದಾರೆ.
ರಾಜ್ಯ ಮುಖ್ಯಕಾರ್ಯದರ್ಶಿ ಕಚೇರಿಯ ಲ್ಯಾಂಡ್ ಲೈನ್ ಗೆ ಕರೆ ಮಾಡಿದ್ದ ಆರೋಪಿ, ವಿಧಾನಸೌಧದಲ್ಲಿ ಬಾಂಬ್ ಇಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಳ್ಳಲಿದೆ ಎಂದು ಹೇಳಿ ಕರೆ ಕಟ್ ಮಾಡಿದ್ದ ಎನ್ನಲಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದ್ದಾರೆ. ಆದರೆ ಯಾವುದೇ ಸ್ಫೋಟಕ ಪತ್ತೆಯಾಗದ ಹಿನ್ನೆಲೆಯಲ್ಲಿ ಇದು ಸುಳ್ಳು ಕರೆ ಎಂದು ಗೊತ್ತಾಗಿದೆ.
ಫೋನ್ ಕರೆ ಆಧರಿಸಿ ಆರೋಪಿಯ ಜಾಡು ಹಿಡಿದ ಪೊಲೀಸರು ಇದೀಗ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಪ್ರಶಾಂತ್ ಎಂದು ಗುರುತಿಸಲಾಗಿದ್ದು, ಆತ ಸಾಫ್ಟ್ ವೇರ್ ಇಂಜಿನಿಯರ್ ಎಂದು ತಿಳಿದುಬಂದಿದೆ. ಆರೋಪಿಯ ವಿಚಾರಣೆ ಮುಂದುವರೆದಿದೆ.