ಬಾಲ್ ಎಂದು ಭಾವಿಸಿ ಮಕ್ಕಳು ನಾಡ ಬಾಂಬ್ ಜೊತೆ ಆಟವಾಡುತ್ತಿದ್ದ ವೇಳೆ ಅದು ಸ್ಪೋಟಿಸಿ ಒಂದು ಮಗು ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಕಾಕಿನಾರ ರೈಲ್ವೆ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಗೇಟ್ ನಂಬರ್ 28ರ ಬಳಿ ಈ ನಾಡ ಬಾಂಬ್ ಇತ್ತು ಎಂದು ಹೇಳಲಾಗಿದೆ.
ಇದನ್ನು ಬಾಲ್ ಎಂದು ಭಾವಿಸಿದ ಮಕ್ಕಳು ಆಟವಾಡುತ್ತಿದ್ದಾಗ ಅದು ಸ್ಪೋಟಗೊಂಡಿದ್ದು, ಇದರ ಪರಿಣಾಮ ಏಳು ವರ್ಷದ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಮತ್ತೊಬ್ಬ 10 ವರ್ಷದ ಬಾಲಕ ಸೇರಿದಂತೆ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.