
ಮಂಡ್ಯ: ನಾಡಬಾಂಬ್ ಸ್ಪೋಟಗೊಂಡು ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕಂಬದಹಳ್ಳಿಯ ಆಂಜನೇಯ ಬೆಟ್ಟದಲ್ಲಿ ಘಟನೆ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕಂಬದಹಳ್ಳಿ ಗ್ರಾಮದ ಆಂಜನೇಯ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯದ ವೇಳೆ ಘಟನೆ ನಡೆದಿದೆ. ಜೈನಬಸದಿ ಶಾಲೆಯಲ್ಲಿ ಓದುತ್ತಿದ್ದ ಮಕ್ಕಳು ಬೆಟ್ಟದ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡಿದ್ದು, ಕಸದ ರಾಶಿಗೆ ವಿದ್ಯಾರ್ಥಿಗಳು ಕೈ ಹಾಕಿದಾಗ ಘಟನೆ ನಡೆದಿದೆ. ಹರಿಹಂತ ಪಾಟೀಲ, ಪಾರ್ಥ ಎಂಬ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.