alex Certify BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೂಗ್ಲಿಯಲ್ಲಿ ಬಾಂಬ್ ಸ್ಫೋಟ; ಓರ್ವ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ

ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೂಗ್ಲಿ ಜಿಲ್ಲೆಯ ಪಾಂಡುವಾ ಎಂಬಲ್ಲಿ ಈ ದುರಂತ ಸಂಭವಿಸಿದೆ. ಮಕ್ಕಳ ಗುಂಪು ಆಟವಾಡುತ್ತಿದ್ದ ಕೊಳದ ಬಳಿ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಓರ್ವ ಬಾಲಕ ಸಾವನ್ನಪ್ಪಿದ್ದು, ಇಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಪಾಂಡುವಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೂಗ್ಲಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.

ಮೇ 7 ನಾಳೆ ಮೂರನೇ ಹಂತದ ಲೋಕಸಭಾ ಚುನಾವಣೆ ಮತದಾನ ನಡೆಯಲಿದೆ. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಾಗ ಬಾಂಬ್ ಸ್ಫೋಟ ಸಂಭವಿಸಿದ್ದು, ಆತಂಕಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...