alex Certify 30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ

ಬೆಂಗಳೂರು: ಮುಂಬೈನಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದೆ.

ಇಂಡಿಗೋ, ಏರ್ ಇಂಡಿಯಾ, ವಿಸ್ತಾರಾ ಏರ್ ಲೈನ್ಸ್ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

ಅಕ್ಟೋಬರ್ 21ರಂದು ಕೆಲವು ವಿಸ್ತಾರಾ ವಿಮಾನಗಳಿಗೆ ಬೆದರಿಕೆ ಕರೆಗಳು ಬಂದಿದ್ದವು. ಪರಿಶೀಲನೆ ಬಳಿಕ ಇದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ ಇದೀಗ ಇಂಡಿಗೋದ 10 ವಿಮಾನಗಳು, ವಿಸ್ತಾರಾ ಏರ್ ಲೈನ್ಸ್ ನ 10 ವಿಮಾನ ಸೇರಿದಂತೆ 30ಕ್ಕೂ ಹೆಚ್ಚು ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ.

ಮುಂಬೈನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನ, ಮಂಗಳೂರು-ಮುಂಬೈ, ಲಕ್ನೋ-ಅಹಮದಾಬಾದ್, ಹೈದರಾಬಾದ್-ಜೆಡ್ಡಾ, ಬೆಂಗಳೂರು-ಜೆಡ್ಡಾ ವಿಮಾನಗಳಿಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿದುಬಂದಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...