ಅಯೋಧ್ಯೆ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನ ಅಯೋಧ್ಯೆ ವಿಮನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಉತ್ತರ ಪ್ರದೇಶದ ಅಯೋಧ್ಯೆಯಿಂದ ಬೆಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವಿಮಾನ ನಿಲ್ದಾಣ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.
ವಿಮಾನದಲ್ಲಿ 130 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ವಿಮಾನದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ತಪಾಸಣೆ ನಡೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.