alex Certify ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್; ಅಪ್ರಾಪ್ತ ವಿದ್ಯಾರ್ಥಿಯಿಂದ ಇ ಮೇಲ್ ಸಂದೇಶ ರವಾನೆಯಾಗಿರುವುದು ಬಹಿರಂಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಟ್ವಿಸ್ಟ್; ಅಪ್ರಾಪ್ತ ವಿದ್ಯಾರ್ಥಿಯಿಂದ ಇ ಮೇಲ್ ಸಂದೇಶ ರವಾನೆಯಾಗಿರುವುದು ಬಹಿರಂಗ

ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಹಾಕಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಅಪ್ರಾಪ್ತ ವಿದ್ಯಾರ್ಥಿ ಇ-ಮೇಲ್ ಸಂದೇಶ ಕಳುಹಿಸಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.

ಗೂಗಲ್ ಮೂಲಕ ಐಡಿ ಪಡೆದಿದ್ದ ಈ ಅಪ್ರಾಪ್ತ ವಿದ್ಯಾರ್ಥಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದು, ಆ ಬಳಿಕ ಎಲ್ಲರಲ್ಲೂ ಆತಂಕ ಮನೆ ಮಾಡಿತ್ತು.

ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ತಮ್ಮ ತೀವ್ರ ಆತಂಕ ವ್ಯಕ್ತಪಡಿಸಿದ್ದರ ಹಿನ್ನೆಲೆಯಲ್ಲಿ ತನಿಖೆ ತೀವ್ರಗೊಳಿಸಿದ್ದ ಪೊಲೀಸರು ಈಗ ಅಪ್ರಾಪ್ತ ವಿದ್ಯಾರ್ಥಿ ಇ-ಮೇಲ್ ಕಳುಹಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ಆದರೆ ಯಾವ ಕಾರಣಕ್ಕೆ ಈ ವಿದ್ಯಾರ್ಥಿ ಬಾಂಬ್ ಬೆದರಿಕೆ ಹಾಕಿದ ಎಂಬುದು ತಿಳಿದು ಬಂದಿಲ್ಲ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...