ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ : ಮಾಜಿ ಸಿಎಂ ʻHDKʼ

ಬೆಂಗಳೂರು : ಶಾಳೆಗಳಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಒಡ್ಡಿರುವುದು ಕಳವಳಕಾರಿಯಾಗಿದ್ದು, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಶಾಲೆಗಳಿಗೆ ಅನಾಮಧೇಯ ವ್ಯಕ್ತಿಗಳು ಬಾಂಬ್ ಬೆದರಿಕೆ ಒಡ್ಡಿರುವುದು ಕಳವಳಕಾರಿ. ಮಕ್ಕಳು, ಪೋಷಕರು ತೀವ್ರವಾಗಿ ಕಳವಳಗೊಂಡಿದ್ದು, ಅವರಲ್ಲಿ ಭೀತಿ ಸೃಷ್ಟಿಸಿ, ಶಾಂತಿ ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುರುದ್ದೇಶದಿಂದಲೇ ದುಷ್ಟಶಕ್ತಿಗಳು ಇಂತಹ ಹುನ್ನಾರ ನಡೆಸಿರಬಹುದು ಎಂದಿದ್ದಾರೆ.

ರಾಜ್ಯ Indian National Congress – Karnataka ಸರಕಾರವು ಯಾವುದೇ ಕಾರಣಕ್ಕೂ ಈ ಘಟನೆಯನ್ನು ಲಘುವಾಗಿ ಪರಿಗಣಿಸಬಾರದು. ಪೋಷಕರು ಮಕ್ಕಳನ್ನು ಧೈರ್ಯವಾಗಿ ಶಾಲೆಗಳಿಗೆ ಕಳಿಸುವಂತಹ ಸುರಕ್ಷತೆ, ಭದ್ರತೆಯ ಖಾತರಿಯನ್ನು ನೀಡಬೇಕು ಎಂದು ಹೇಳಿದ್ದಾರೆ.

ಈ ಬೆದರಿಕೆಗಳ ಬಗ್ಗೆ ಅಮೂಲಾಗ್ರ ತನಿಖೆ ನಡೆಸಿ, ಇದರ ಹಿಂದೆ ಯಾರಿದ್ದಾರೆ? ಮೂಲ ಯಾವುದು ಎನ್ನುವುದನ್ನು ಪತ್ತೆ ಹಚ್ಚಿ ದುಷ್ಟರ ಹೆಡೆಮುರಿ ಕಟ್ಟಬೇಕು. ಈ ಬಗ್ಗೆ ಕೇಂದ್ರ ಸರಕಾರದ ನೆರವು ಪಡೆಯುವ ಬಗ್ಗೆ ರಾಜ್ಯ ಸರಕಾರ ಮೀನಾಮೇಷ ಎಣಿಸಬಾರದು ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read