ಬೆಂಗಳೂರು : ಬೆಂಗಳೂರಿನ 28 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಪೋಷಕರಲ್ಲಿ ಆತಂಕ ಮನೆ ಮಾಡಿದೆ.ಈ ವಿಚಾರ ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಮಕ್ಕಳನ್ನು ಪೋಷಕರು ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.
ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಮಕ್ಕಳ ಸುರಕ್ಷತೆ ವಿಚಾರ ಆಗಿರುವುದ್ದರಿಂದ ಮೂಲ ಪತ್ತೆ ಮಾಡುವವರೆಗೂ ಬಿಡಲ್ಲ ಎಂದಿದ್ದಾರೆ. ಕರಣವನ್ನು ಲಘುವಾಗಿ ತೆಗೆದುಕೊಂಡಿಲ್ಲ. ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ.ಬೆಂಗಳೂರಿಗೆ ವಾಪಾಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ ಎಂದರು.
ನೀವು ನಮ್ಮ ಧರ್ಮವನ್ನು ಒಪ್ಪಿಕೊಳ್ಳಲೇಬೇಕು, ಇಲ್ಲವಾದಲ್ಲಿ ನಿಮ್ಮ ಮಕ್ಕಳನ್ನು ಕೊಲ್ಲಲಾಗುವುದು, ಇಸ್ಲಾಂ ಅನ್ನು ಒಪ್ಪಿಕೊಳ್ಳಿ, ಇಲ್ಲವಾದಲ್ಲಿ ಸಾಯಲು ಸಿದ್ದರಾಗಿ ಎಂದು ಬೆದರಿಕೆಯೊಡ್ಡಲಾಗಿದೆ.