
ರಾಷ್ಟ್ರ ರಾಜಧಾನಿ ನವದೆಹಲಿಯ ಹಲವು ಶಾಲೆಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸಂಬಂಧಪಟ್ಟ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಒಂದೇ ಐಪಿ ಅಡ್ರೆಸ್ ಮೂಲಕ ಈ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದ್ದು, ಸಂಸ್ಕೃತಿ ಶಾಲೆ, ಸಂತ ಮೇರಿ ಶಾಲೆ, ದ್ವಾರಕಾದ ಪಬ್ಲಿಕ್ ಸ್ಕೂಲ್ ಗಳಿಗೆ ಇಮೇಲ್ ಬಂದಿದೆ.
ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆಯಲ್ಲಿ ಈ ಮೂರು ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.