ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನು ಮಲೆನಾಡಿನ ತೀರ್ಥಹಳ್ಳಿ ಮೂಲದ ವ್ಯಕ್ತಿ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ.
ಈತ ಆಂಧ್ರಪ್ರದೇಶದ ತಿರುಪತಿ ಅಥವಾ ಹೈದ್ರಾಬಾದ್ನಲ್ಲಿ ಆತನ ತಲೆಮರೆಸಿಕೊಂಡಿದ್ದಾನೆ ಎಂಬ ಮಾಹಿತಿ ಇದ್ದು, ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈತನಿಗೂ ಮಂಗಳೂರು ಕುಕ್ಕರ್ ಸ್ಪೋಟ, ತಮಿಳುನಾಡಿನ ಕೊಯಮತ್ತೂರಿನ ಬಾಂಬ್ ಸ್ಫೋಟ, ಶಿವಮೊಗ್ಗದ ತುಂಗಾ ತೀರದ ಟ್ರಯಲ್ ಬ್ಲಾಸ್ಟ್ ಗೂ ಸಂಬಂಧವಿದೆ ಎಂದು ಹೇಳಲಾಗಿದೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಬಾಂಬರ್ ಗಾಗಿ ಎನ್ ಐ ಎ ಅಧಿಕಾರಿಗಳು ತೀವ್ರ ಶೋಧ ನಡೆಸುತ್ತಿದ್ದಾರೆ. ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ, ಬಾಂಬ್ ಸ್ಪೋಟದ ತನಿಖೆ ಒಂದು ಹಂತಕ್ಕೆ ಬಂದಿದೆ. ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ, ಅದನ್ನ ಕರ್ನಫರ್ಮ್ ಮಾಡ್ಕೊಬೇಕು, ಯಾರು ಅಂತ ಸಂಜೆ ಒಳಗೆ ಗೊತ್ತಾಗುತ್ತದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಬಗ್ಗೆ ಸುಳಿವು ನೀಡಿದ್ರೆ 10 ಲಕ್ಷ ಬಹುಮಾನ ನೀಡುವುದಾಗಿ ಎನ್ ಐ ಎ ಘೋಷಣೆ ಮಾಡಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ ಐ ಎ ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ.