ಬುಧವಾರದಂದು ದೇಶದಾದ್ಯಂತ ರಕ್ಷಾ ಬಂಧನ ದಿನವನ್ನು ಭರ್ಜರಿಯಾಗಿ ಆಚರಿಸಲಾಗಿದ್ದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಂಭ್ರಮಿಸಿದ್ದಾರೆ. ಇದರ ಮಧ್ಯೆ ತೆಲಂಗಾಣದಲ್ಲಿ ಇದೇ ದಿನದಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೆಟ್ಟಿಗರ ಕಣ್ಣಂಚನ್ನು ತೇವಗೊಳಿಸಿದೆ.
ಹೌದು, ರಕ್ಷಾ ಬಂಧನ ದಿನದಂದೇ ತನ್ನ ಪ್ರೀತಿಯ ಅಣ್ಣ ತೀವ್ರ ಹೃದಯಾಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಸಹೋದರಿ ಕಣ್ಣೀರಿಡುತ್ತಲೇ ಕೊನೆಯ ಬಾರಿಗೆ ರಾಖಿ ಕಟ್ಟಿದ್ದಾರೆ. ಈ ದೃಶ್ಯ ಅಲ್ಲಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿದ್ದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ.
ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದ್ದು, ಇದನ್ನು ನೋಡಿದ ನೆಟ್ಟಿಗರು ಆ ಸಹೋದರಿಯ ನೋವಿನ ಕ್ಷಣಕ್ಕೆ ಮನ ಮಿಡಿದಿದ್ದಾರೆ. ಅಲ್ಲದೆ ಮೃತ ವ್ಯಕ್ತಿಯ ಆತ್ಮಕ್ಕೆ ಶಾಂತಿ ಕೋರಿದ್ದಾರೆ.