ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ.
ಲಸಿಕೆಗಾಗಿ ಮೊದಲೇ ನೋಂದಣಿ ಮಾಡಿಕೊಳ್ಳುವ ಅಗತ್ಯವಿರುವುದಿಲ್ಲ. ನೇರವಾಗಿ ಲಸಿಕ ಕೇಂದ್ರಕ್ಕೆ ತೆರಳಿ ಬೂಸ್ಟರ್ ಡೋಸ್ ಪಡೆದುಕೊಳ್ಳಬಹುದಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ.
60 ವರ್ಷ ಮೇಲ್ಪಟ್ಟವರು ಮತ್ತು ಕೊರೋನಾ ವಾರಿಯರ್ಸ್, ಹೆಲ್ತ್ ವರ್ಕರ್ಸ್ ಗಳಿಗೆ ಜನವರಿ 10 ರಿಂದ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಹೇಳಲಾಗಿದೆ.