ವಿಜಯಪುರ: ತೆರೆದ ಕೊಳವೆ ಬಾವಿಗೆ ಎರಡು ವರ್ಷದ ಮಗು ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದ ಸಮೀಪ ಜಮೀನಿನಲ್ಲಿ ನಡೆದಿದೆ.
ಸಾತ್ವಿಕ್ ಬೋರ್ ವೆಲ್ ಗೆ ಬಿದ್ದ ಮಗು ಎಂದು ಹೇಳಲಾಗಿದೆ. ಸಾತ್ವಿಕ್ ರಕ್ಷಣೆಗೆ ಬಿರುಸಿನ ಕಾರ್ಯಾಚರಣೆ ಆರಂಭಿಸಲಾಗಿದೆ. ಆಟವಾಡಲು ಹೋಗಿದ್ದ ವೇಳೆ ಬಾಲಕ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಇಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.