alex Certify BREAKING NEWS: ಅಂತಿಮ ಹಂತ ತಲುಪಿದ ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಅಂತಿಮ ಹಂತ ತಲುಪಿದ ಕೊಳವೆ ಬಾವಿಗೆ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆ

ವಿಜಯಪುರ: ಆಟವಾಡುತ್ತಾ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಬಾಲಕನ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತ ತಲುಪಿದ್ದು, ಇನ್ನು ಕೆಲವೇ ಸಮಯಗಳಲ್ಲಿ ಮಗುವನ್ನು ಸುರಕ್ಷಿತವಾಗಿ ಹೊರತೆಗೆಯಲಾಗುತ್ತದೆ.

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಸಾತ್ವಿಕ್ ಮನೆ ಪಕ್ಕದಲ್ಲಿದ್ದ ಕೊಳವೆ ಬಾವಿಗೆ ಬಿದ್ದಿದ್ದು, ನಿನ್ನೆ ಸಂಜೆಯಿಂದ ನಿರಂತರವಾಗಿ ಬಾಲಕನ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. 20 ಅಡಿ ಆಳದಲ್ಲಿ ಬಾಲಕ ಸಿಲುಕಿಕೊಂಡಿದ್ದಾನೆ. ಕೊಳವೆ ಬಾವಿಯ ಪಕ್ಕದಲ್ಲಿ ಅಡ್ಡಲಾಗಿ ಸುರಂಗ ಮಾರ್ಗವನ್ನು ತೆರೆದು ಬಾಲಕನನ್ನು ಸುರಕ್ಷಿತವಾಗಿ ಹೊರತೆಗೆಯುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗಿದೆ.

ಕೆಲವೇ ಸಮಯದಲ್ಲಿ ಸುರಂಗ ತೆಗೆಯುವ ಕಾರ್ಯ ಪೂರ್ಣಗೊಳ್ಳಲಿದ್ದು ಕೊಳವೆಬಾವಿಯಲ್ಲಿ ಬಾಲಕ ಬಿದ್ದಿರುವ ಸ್ಥಳಕ್ಕೆ ತಲುಪಲಿದೆ. ಕೆಲವೇ ಸಮಯದಲ್ಲಿ ರಕ್ಷಣಾ ಸಿಬ್ಬಂದಿ ಮಗುವನ್ನು ಹೊರತೆಗೆಯಲಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ವೈದ್ಯರು ಉಪಸ್ಥಿತರಿದ್ದು, ಬಾಲಕನನ್ನು ಹೊರ ತೆಗೆದ ತಕ್ಷಣ ಜಿಲ್ಲಾಸ್ಪತ್ರೆಗೆ ದಾಖಲಿಸಿಸಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಬಾಲಕ ಸುರಕ್ಷಿತವಾಗಿ ಹೊರಬರಲಿ ಎಂಬುದೇ ಎಲ್ಲರ ಪ್ರಾರ್ಥನೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...