alex Certify ಗಣರಾಜ್ಯೋತ್ಸವ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣರಾಜ್ಯೋತ್ಸವ ಅತಿಥಿಯಾಗಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್

ನವದೆಹಲಿ: 2021 ರ ಗಣರಾಜ್ಯೋತ್ಸವಕ್ಕೆ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಡಾಮೆನಿಕ್ ರಾವ್ ದೆಹಲಿಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್, ಜೈಶಂಕರ್ ಅವರೊಂದಿಗೆ ನಡೆದ ಮಾತುಕತೆ ವೇಳೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಭಾರತದ ಗಣರಾಜ್ಯೋತ್ಸವ ಸಂದರ್ಭದಲ್ಲಿ ಅನೇಕ ದೇಶಗಳ ಅಧ್ಯಕ್ಷರು ಮತ್ತು ಪ್ರಧಾನಿಗಳನ್ನು ಅತಿಥಿಗಳಾಗಿ ಆಹ್ವಾನಿಸಲಾಗುವುದು. ಈ ಬಾರಿ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಬೇಕೆಂದು ಭಾರತ ನೀಡಿರುವ ಆಹ್ವಾನವನ್ನು ಬೋರಿಸ್ ಜಾನ್ಸನ್ ಸ್ವೀಕರಿಸಿದ್ದಾರೆ. ಇದೊಂದು ದೊಡ್ಡ ಗೌರವವಾಗಿದ್ದು ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಹೇಳಿದ್ದಾರೆ.

1993 ರಲ್ಲಿ ಜಾನ್ ಮೇಜರ್ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದ ಗೌರವಾನ್ವಿತ ಅತಿಥಿಯಾಗಿ ಪಾಲ್ಗೊಂಡ ನಂತರ ಭಾಗವಹಿಸುತ್ತಿರುವ ಬೋರಿಸ್ ಜಾನ್ಸನ್ ಎರಡನೇ ಬ್ರಿಟಿಷ್ ನಾಯಕರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...