ಸೋಂಕಿನ ಹಾವಳಿ ಹೆಚ್ಚಾಗುತ್ತಿದ್ದು, ಹೀಗಾಗಿ ಜನರು ಆತಂಕದಲ್ಲಿದ್ದಾರೆ. ಸರ್ಕಾರ ಹಾಗೂ ತಜ್ಞರು ಈಗಾಗಲೇ ಜನರಿಗೆ ಲಸಿಕೆ ಹಾಕಿಸಿಕೊಳ್ಳುವಂತೆ ಹೇಳಿದ್ದಾರೆ. ಆದರೆ, ಎರಡೂ ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ.
ಈ ಅಧ್ಯಯನವನ್ನು ಸರ್ಕಾರ ಕೂಡ ಒಪ್ಪಿದೆ. ಇದು ಆತಂಕಕಾರಿ ವಿಷಯ ಎನ್ನಲಾಗುತ್ತಿದೆ. ಎರಡೂ ಡೋಸ್ ಲಸಿಕೆ ಪಡೆದ ವ್ಯಕ್ತಿಗಳಲ್ಲಿ ಕೂಡ ರೋಗ ನಿರೋಧಕ ಶಕ್ತಿ ಕುಂದಿದೆ ಎಂದು ಅಧ್ಯಯನ ಹೇಳಿದೆ.
ಈ ವರದಿಯನ್ನು ವ್ಯಾಕ್ಸಿನ್ ಸರ್ವೆಯಲೆನ್ಸ್ ರಿಪೋರ್ಟ್ ನ್ನು ಯುಕೆ ಆರೋಗ್ಯ ಇಲಾಖೆಗೆ ಸಲ್ಲಿಕೆಯಾಗಿದೆ. ಎರಡೂ ಡೋಸ್ ಲಸಿಕೆ ಪಡೆದ ನಂತರ ಸೋಂಕಿಗೆ ಒಳಗಾದ ವ್ಯಕ್ತಿಗಳಲ್ಲಿ ಎನ್ ಆಂಟಿಬಾಡಿ ಮಟ್ಟ ಕುಸಿದಿರುವುದು ಅಧ್ಯಯನದಿಂದ ತಿಳಿದು ಬಂದಿದೆ.
ಅಲ್ಲದೇ, ಲಸಿಕೆ ಪಡೆದ ವಯಸ್ಕರರೇ ಲಸಿಕೆ ಪಡೆಯದವರಿಗಿಂತ ಹೆಚ್ಚು ಸೋಂಕಿಗೆ ತುತ್ತಾಗಿರುವುದು ಕೂಡ ಅಧ್ಯಯನದಿಂದ ತಿಳಿದು ಬಂದಿದೆ.
ಹೀಗಾಗಿ ಜನರು ಹೆಚ್ಚು ಜಾಗೃತಿಯಿಂದಲೇ ಇದ್ದು, ಸರ್ಕಾರ ಸೂಚಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸರ್ಕಾರ ಮನವಿ ಮಾಡಿಕೊಳ್ಳುತ್ತಿದೆ.