alex Certify ‘ರಾಹುಲ್ ಗಾಂಧಿ, ಉದಯನಿಧಿ ಸ್ಟಾಲಿನ್ ಇಬ್ಬರೂ ಪಪ್ಪುಗಳೇ’ : ಮಾಜಿ ಸಚಿವ ಶ್ರೀರಾಮುಲು ವಾಗ್ಧಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ರಾಹುಲ್ ಗಾಂಧಿ, ಉದಯನಿಧಿ ಸ್ಟಾಲಿನ್ ಇಬ್ಬರೂ ಪಪ್ಪುಗಳೇ’ : ಮಾಜಿ ಸಚಿವ ಶ್ರೀರಾಮುಲು ವಾಗ್ಧಾಳಿ

ಬಳ್ಳಾರಿ : ರಾಹುಲ್ ಗಾಂಧಿ, ಉದಯನಿಧಿ ಸ್ಟಾಲಿನ್ ಇಬ್ಬರೂ ಪಪ್ಪುಗಳೇ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ವಾಗ್ಧಾಳಿ ನಡೆಸಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಬಿ.ಶ್ರೀರಾಮುಲು ಸನಾತನ ಧರ್ಮದ ಬಗ್ಗೆ ಮಾತನಾಡುವ ಉದಯ ನಿಧಿಗೆ ಸನಾತನ ಧರ್ಮದ ಬಗ್ಗೆ ಏನು ಗೊತ್ತು..? ರಾಹುಲ್ ಗಾಂಧಿಯೂ ಸಹ ಉದಯ ನಿಧಿ ತರಹನೇ ಪಪ್ಪು ಎಂದು ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿಕೊಂಡು ತಮಿಳುನಾಡಿಗೆ ನೀರು ಬಿಟ್ಟಿದ್ದಾರೆ, ಮನಸ್ಸು ಮಾಡಿದ್ರೆ ತಮಿಳುನಾಡಿಗೆ ನೀರು ಬಿಡದೇ ಮುಂದೂಡಬಹುದಿತ್ತು, ಆದರೆ ಕಾಂಗ್ರೆಸ್ ಸರ್ಕಾರ ಈ ಕೆಲಸ ಮಾಡಿಲ್ಲ ಎಂದು ವಾಗ್ಧಾಳಿ ನಡೆಸಿದರು.

ಮಹಾಭಾರತ ಕಾಲದಿಂದಲೂ ನಮ್ಮ ದೇಶಕ್ಕೆ ಭಾರತ ಎಂಬ ಹೆಸರಿದೆ. ದೇಶಕ್ಕೆ ಇಂಡಿಯಾ ಎಂಬುದು ಬ್ರಿಟಿಷರು ಇಟ್ಟಿರುವ ಹೆಸರು ಎಂದಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...