
35 ವರ್ಷದ ಮಹಿಳೆಯ ಮೇಲೆ 13 ವರ್ಷದ ಬಾಲಕ ಸೇರಿದಂತೆ ಇಬ್ಬರು ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು 13 ವರ್ಷದ ಬಾಲಕನ್ನು ಬಂಧಿಸಿ, ಮತ್ತೋರ್ವನಿಗಾಗಿ ಬಲೆ ಬೀಸಿದ್ದಾರೆ.
ಈ ಅಮಾನವೀಯ ಹಾಗೂ ಭಯಾನಕ ಘಟನೆ ಲಂಡನ್ ನಲ್ಲಿರುವ ಪಾರ್ಕ್ ಒಂದರಲ್ಲಿ ನಡೆದಿದೆ. ಈ ಕುರಿತು ಮಹಿಳೆ ದೂರು ನೀಡಿದ್ದು, ಮಂಗಳವಾರ ರಾತ್ರಿ 11ರ ಹೊತ್ತಿಗೆ ಪ್ಲಮ್ ಸ್ಟೆಡ್ ನಲ್ಲಿರುವ ವಿನ್ಸ್ ಕಾಮನ್ ನಲ್ಲಿ ಇಬ್ಬರು ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ಸಂದರ್ಭದಲ್ಲಿ ನಾಯಿಯೊಂದಿಗೆ ವಾಕಿಂಗ್ ಮಾಡುತ್ತಿದ್ದ ವ್ಯಕ್ತಿ ಇದನ್ನು ಕಂಡು 13 ವರ್ಷದ ಬಾಲಕನನ್ನು ಹಿಡಿದಿದ್ದಾರೆ. ಈ ಸಂದರ್ಭದಲ್ಲಿ ನಾಯಿ ಬಾಲಕನನ್ನು ಕಚ್ಚಿದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
BIG NEWS: ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಿ; ಪಕ್ಷಾತೀತವಾಗಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಶಾಸಕರು
ನಾಯಿಯೊಂದಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿಯಿಂದಾಗಿ ಪ್ರಕರಣದ ಆರೋಪಿಗಳನ್ನು ಬಂಧಿಸಲು ಪೊಲೀಸರಿಗೆ ಸಹಕಾರಿಯಾಗಿದೆ. ಇನ್ನೊಬ್ಬ ಆರೋಪಿಯನ್ನು ಸದ್ಯದಲ್ಲಿಯೇ ಬಂಧಿಸುವುದಾಗಿ ಪೊಲೀಸರು ಹೇಳಿದ್ದಾರೆ. ಘಟನೆ ಕುರಿತಂತೆ ಇಡೀ ಬ್ರಿಟನ್ ನಲ್ಲಿ ಆತಂಕ ಸೃಷ್ಟಿಯಾಗಿದೆ.
ಸದ್ಯ 13 ವರ್ಷದ ಬಾಲಕನನ್ನು ಬಂಧಿಸಿರುವ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವ ಪೊಲೀಸರು, ಇನ್ನೊಬ್ಬ ಆರೋಪಿಗಾಗಿ ಬಲೆ ಬೀಸಿದ್ದಾರೆ.