
ರಾಮನಗರ: ರಾಮನಗರದ ಜಿಲ್ಲಾ ಕ್ರೀಡಾಂಗಣದ ಹಿಂದಿನ ರೈಲು ಹಳಿ ಬಳಿ ಕೊಲೆಯಾದ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
ಶೀರಹಳ್ಳ ಬಳಿಯ ನಿರ್ಜನ ಪ್ರದೇಶದಲ್ಲಿ ಮೃತ ದೇಹ ಕಂಡು ಬಂದಿದೆ. ಆರು ವರ್ಷದ ಬಾಲಕನನ್ನು ಕೊಂದು ರೈಲ್ವೇ ಹಳಿಯ ಸಮೀಪ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳೀಯರು ಬಾಲಕನ ಶವ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುರೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಮನಗರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.