ಮೈಸೂರು: ತೆಂಗಿನ ಮರ ಬಿದ್ದು ಬಾಲಕ ಸಾವನ್ನಪ್ಪಿದ್ದ ಘಟನೆ ಕುಪ್ಪರವಳ್ಳಿ ಗ್ರಾಮದ ತೋಟದ ಮನೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರು ವರ್ಷದ ಭರತ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ತೋಟದ ಮನೆಯ ಬಳಿ ಕ್ರಿಕೆಟ್ ಆಡುತ್ತಿದ್ದ ವೇಳೆಯಲ್ಲಿ ತೆಂಗಿನ ಮರಬಿದ್ದು, ಭರತ್ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಬಾಲಕಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.