ದಾವಣಗೆರೆ: ನಗರದ ಸರಸ್ವತಿಪುರದಲ್ಲಿ ನೀರಿನ ತೊಟ್ಟಿಗೆ ಬಿದ್ದು ಬಾಲಕ ಮೃತಪಟ್ಟ ಘಟನೆ ನಡೆದಿದೆ. ಆರು ವರ್ಷದ ಮೋಹಿತ್ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ.
ಆಟವಾಡುತ್ತಿದ್ದ ಬಾಲಕ ನಿನ್ನೆ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದು, ಮೋಹಿತ್ ಗಾಗಿ ಕುಟುಂಬದವರು ಹುಡುಕಾಟ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ರಾತ್ರಿವೇಳೆಗೆ ಮನೆಯ ಪಕ್ಕದಲ್ಲಿಯೇ ನಿರ್ಮಾಣ ಹಂತದ ಕಟ್ಟಡದಲ್ಲಿ ಪರಿಶೀಲನೆ ನಡೆಸಿದಾಗ ನೀರಿನ ತೊಟ್ಟಿಯಲ್ಲಿ ಮಗುವಿನ ಮೃತದೇಹ ಕಂಡು ಬಂದಿದೆ.
ಕೆಟಿಜೆ ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಟ್ಟಡ ಮಾಲೀಕನ ವಿರುದ್ಧ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.