ಬೆಂಗಳೂರು: ಬಿಪಿಎಲ್ ಹಾಗೂ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಸಹಿಸುದ್ದಿಯೊಂದು ಹೊರಬಿದ್ದಿದೆ. ಶೀಘ್ರದಲ್ಲಿಯೇ ಕಾರ್ಡ್ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ಹೊಸದಾಗಿ ಬಿಪಿಎಲ್ ಪಡಿತರ ಚೀಟಿಗೆ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಆದಷ್ಟು ಬೇಗ ಎಲ್ಲರಿಗೂ ಕಾರ್ಡ್ ವಿತರಣೆ ಮಾಡಲಾಗುವುದು. ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಣೆಗೆ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಆರೋಗ್ಯ ಯೋಜನೆಗಾಗಿ ಕಾರ್ಡ್ ಬಯಸುವವರಿಗೆ ಬಿಪಿಎಲ್ ಎಬಿ ಎಂದು ನಮೂದಿಸಿ ಕಾರ್ಡ್ ನೀಡುವ ಚಿಂತನೆ ಇದೆ. ಇಂತವರಿಗೆ ಪಡಿತರ ಯೋಜನೆ ಲಾಭ ಇರುವುದಿಲ್ಲ. ಆದರೆ ಆರೋಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ಈ ಕಾರ್ಡ್ ಬಳಸಿಕೊಳ್ಳಬಹುದು.
ಇನ್ನು ಆರೋಗ್ಯ ಯೋಜನೆಗಾಗಿಯೇ ಬಿಪಿಎಲ್ ಕಾರ್ಡ್ ವಿತರಿಸುವ ಬಗ್ಗೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ಕಾರ್ಡ್ ವಿತರಿಸಲು ನಿರ್ಧರಿಸಲಾಗುವುದು ಎಂದರು.