ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಹೊಂದಿದ ಶ್ರೀಮಂತರು ಕಾರ್ಡ್ ಗಳನ್ನು ಹಿಂತಿರುಗಿಸಲು ಗಡುವು ಮುಗಿದಿದ್ದು ಆಹಾರ ಇಲಾಖೆಯಿಂದ ಪರಿಶೀಲನೆ ಕಾರ್ಯ ಮುಂದುವರೆದಿದೆ.
ಅನರ್ಹರನ್ನು ವಿವಿಧ ಆಯಾಮಗಳಲ್ಲಿ ಪತ್ತೆಹಚ್ಚಿ ಪರಿಶೀಲನೆ ನಡೆಸಲಾಗುತ್ತಿದೆ. ಸಿಕ್ಕಿಬಿದ್ದ ಅನರ್ಹರಿಗೆ ಎಪಿಎಲ್ ಕಾರ್ಡ್ ನೀಡಲಾಗುತ್ತಿದೆ. ಅನೇಕರಿಗೆ ದಂಡ ವಿಧಿಸಲಾಗಿದೆ. ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವ ಕುಟುಂಬದ ಸದಸ್ಯರ, ಆಧಾರ್ ಸಂಖ್ಯೆಯನ್ನು ಆಧರಿಸಿ ವಿವಿಧ ಇಲಾಖೆಗಳ ದತ್ತಾಂಶದೊಂದಿಗೆ ಪರಿಶೀಲನೆ ನಡೆಸಿದ್ದು, ಅನೇಕ ಅನರ್ಹರು ಬಿಪಿಎಲ್ ಕಾರ್ಡ್ ಗಳು ಪತ್ತೆಯಾಗಿವೆ. ಅಂತಹ ಅನರ್ಹ ಕಾರ್ಡ್ ದಾರರಿಗೆ ದಂಡ ವಿಧಿಸಲಾಗುತ್ತದೆ. ಆದರೆ, ಮಾನವೀಯ ನೆಲೆಯಲ್ಲಿ ಬಿಪಿಎಲ್ ಕಾರ್ಡ್ ಪಡೆದುಕೊಂಡ ಅನರ್ಹರಿಗೆ ಎಪಿಎಲ್ ಕಾರ್ಡ್ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.
ಆಹಾರ ಇಲಾಖೆಯಿಂದ ಅನರ್ಹರು ಬಿಪಿಎಲ್ ಕಾರ್ಡ್ ಪಡೆಯುವುದನ್ನು ಪತ್ತೆ ಮಾಡಲು ನಿರಂತರ ಪರಿಶೀಲನೆ ಕಾರ್ಯ ಮುಂದುವರೆದಿದೆ. ಇದರೊಂದಿಗೆ ಮೃತಪಟ್ಟವರ ಹೆಸರಿನಲ್ಲಿ ಪಡಿತರ ವಿತರಿಸುತ್ತಿದ್ದು, ಇಂತಹ 57,014 ಮಂದಿಯ ಹೆಸರನ್ನು ಡಿಲಿಟ್ ಮಾಡಲಾಗಿದೆ. ಒಂದು ವೇಳೆ ಪರಿಶೀಲನೆ ಸಂದರ್ಭದಲ್ಲಿ ಎಪಿಎಲ್ ಕಾರ್ಡ್ ನೀಡಿದ್ದರೆ ಅಂತಹವರು ಅಗತ್ಯ ದಾಖಲೆ ಸಲ್ಲಿಸಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಬಹುದು ಎನ್ನಲಾಗಿದೆ.