alex Certify ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್: 4 ಲಕ್ಷ ರೂ. ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರಿಗೆ ಶಾಕ್: 4 ಲಕ್ಷ ರೂ. ದಂಡ

ಶಿವಮೊಗ್ಗ: ಸರ್ಕಾರಿ ನೌಕರರು ಅಕ್ರಮವಾಗಿ ಪಡೆದುಕೊಂಡಿದ್ದ ಬಿಪಿಎಲ್ ಕಾರ್ಡ್ ಗಳನ್ನು ಗುರುತಿಸಿದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅವುಗಳನ್ನು ಎಪಿಎಲ್ ಕಾರ್ಡ್ ಗೆ ಬದಲಾಯಿಸಿದೆ.

ಶಿವಮೊಗ್ಗದಲ್ಲಿ 72 ಸರ್ಕಾರಿ ನೌಕರರಿಗೆ 4,12,890 ರೂಪಾಯಿ ದಂಡ ವಿಧಿಸಲಾಗಿದೆ. ರಾಜ್ಯದಾದ್ಯಂತ ಆಕ್ರಮ ಬಿಪಿಎಲ್ ಕಾರ್ಡ್ ಗಳನ್ನು ಎಪಿಎಲ್ ಆಗಿ ಬದಲಿಸುವ ಕಾರ್ಯಕ್ಕೆ ಆಹಾರ ಇಲಾಖೆ ಚಾಲನೆ ನೀಡಿದ್ದು, ಇದರ ಭಾಗವಾಗಿ ಜಿಲ್ಲಾ ಆಹಾರ ಇಲಾಖೆ ಶಿವಮೊಗ್ಗ ಜಿಲ್ಲೆಯಲ್ಲಿ ಆಕ್ರಮವಾಗಿ ಬಿಪಿಎಲ್ ಕಾರ್ಡ್ ಹೊಂದಿದ್ದ ಸರ್ಕಾರಿ ನೌಕರರು, ತೆರಿಗೆ ಪಾವತಿದಾರರ ಸಾವಿರಾರು ಕಾರ್ಡ್ ಗಳನ್ನು ಪತ್ತೆ ಮಾಡಿ ಎಪಿಎಲ್ ಗೆ ಪರಿವರ್ತಿಸಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 4.9 ಲಕ್ಷ ಪಡಿತರ ಚೀಟಿಗಳಿದ್ದು, ಇವುಗಳಲ್ಲಿ 1.2 ಲಕ್ಷ ಎಪಿಎಲ್, 3.52 ಲಕ್ಷ ಬಿಪಿಎಲ್, 36,000 ಅಂತ್ಯೋದಯ ಕಾರ್ಡ್ ಗಳಿವೆ. ಕಳೆದ ಏಪ್ರಿಲ್ 1ರಿಂದ ಅ. 31 ರವರೆಗೆ 53,342 ಕಾರ್ಡ್ ಗಳ ಪರಿಶೀಲನೆ ನಡೆಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...