ಬೆಂಗಳೂರು: ಆರ್ಥಿಕವಾಗಿ ಸದೃಢರಾದವರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ವಾಪಸ್ ನೀಡಿದ ನಂತರ ಹೊಸ ಅರ್ಜಿದಾರರಿಗೆ ಬಿಪಿಎಲ್ ಕಾರ್ಡ್ ನೀಡಲು ಆಹಾರ ಇಲಾಖೆ ಚಿಂತನೆ ನಡೆಸಿದೆ.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಅನುಸಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗಳನ್ನು ನೀಡಬೇಕಿರುವ ಸಂಖ್ಯೆಗಿಂತ ಅಧಿಕ ಪ್ರಮಾಣದಲ್ಲಿ ಆರ್ಥಿಕವಾಗಿ ಸಬಲರಾಗಿರುವವರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಸುಮಾರು 3.5 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಗಳನ್ನು ಅಕ್ರಮವಾಗಿ ಪಡೆದುಕೊಂಡಿದ್ದು, ಅಂತವರು ಕಾರ್ಡ್ ವಾಪಸ್ ಮಾಡಿದ ನಂತರ ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ವಿತರಿಸಲಾಗುತ್ತದೆ.
ಸುಮಾರು 3.55 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಬದಲಾಯಿಸಲಾಗಿದೆ. ಬಿಪಿಎಲ್ ಕಾರ್ಡ್ ಗಾಗಿ ಸುಮಾರು 4 ಲಕ್ಷಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾಗಿದ್ದು, ಪರಿಶೀಲನೆ ನಂತರ ಕಾರ್ಡ್ ವಿತರಿಸಲಾಗುವುದು ಎಂದು ಹೇಳಲಾಗಿದೆ.