ಬೆಂಗಳೂರು: ಬಿಪಿಎಲ್ ಕಾರ್ಡ್ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಧದಷ್ಟು ಅರ್ಜಿಗಳನ್ನು ಮಾತ್ರ ಪರಿಗಣಿಸಲು ಸರ್ಕಾರ ಆದೇಶ ಹೊರಡಿಸಿದೆ. ಸುಮಾರು 4.76 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 2.76 ಲಕ್ಷ ಅರ್ಜಿಗಳನ್ನು ಮಾತ್ರ ಪರಿಗಣಿಸುವಂತೆ ಸರ್ಕಾರ ಆದೇಶಿಸಿದೆ. ಇದರಿಂದಾಗಿ ಬಿಪಿಎಲ್ ಕಾರ್ಡ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಿದವರಿಗೆ ನಿರಾಸೆಯಾಗಿದೆ ಎಂದು ಹೇಳಲಾಗಿದೆ.
ಬಿಪಿಎಲ್ ಕಾರ್ಡ್ ಗಾಗಿ ಸಲ್ಲಿಕೆಯಾದ ಅರ್ಜಿಗಳಲ್ಲಿ ಬಹುತೇಕ ಪರಿಶೀಲನೆಗೆ ಬಾಕಿ ಉಳಿದಿದೆ. 1.55 ಲಕ್ಷ ಕುಟುಂಬಗಳಿಗೆ ಎಪಿಎಲ್ ಕಾರ್ಡ್ ವಿತರಿಸಲು ಆಹಾರ ಇಲಾಖೆಗೆ ಸರ್ಕಾರ ಸೂಚನೆ ನೀಡಿದೆ. ಪಡಿತರ ಚೀಟಿಗಾಗಿ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ನಡೆಯುತ್ತಿದ್ದರೂ, ಬಾಕಿ ಉಳಿದ ಅರ್ಜಿಗಳ ಪರಿಶೀಲನೆ ಮತ್ತು ವಿಲೇವಾರಿ ವಿಳಂಬವಾಗುತ್ತಿದೆ.
ಬಿಪಿಎಲ್ ಕಾರ್ಡ್ ಗೆ ಸಲ್ಲಿಕೆಯಾದ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕೆಂಬ ಒತ್ತಾಯ ಕೇಳಿಬಂದಿದೆ. ಅಧಿಕಾರಿಗಳಿಂತ ಪರಿಶೀಲನೆ ಕಾರ್ಯ ನಡೆಸಲಾಗಿದೆ. ಅಧಿಕಾರಿಗಳು ಅರ್ಜಿ ಸಲ್ಲಿಸಿದವರ ಸ್ಥಳ ಪರಿಶೀಲನೆ ಕಾರ್ಯ ನಡೆಸಲಿದ್ದು, ಅರ್ಹರಿಗೆ ಪಡಿತರ ಚೀಟಿ ವಿತರಿಸಲಿದ್ದಾರೆ ಎನ್ನಲಾಗಿದೆ.