alex Certify ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 85 ಸಾವಿರ ಅನರ್ಹ ಪಡಿತರ ಚೀಟಿ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 85 ಸಾವಿರ ಅನರ್ಹ ಪಡಿತರ ಚೀಟಿ ರದ್ದು

ಬೆಂಗಳೂರು: ಶ್ರೀಮಂತರು ಅಕ್ರಮವಾಗಿ ಪಡೆದುಕೊಂಡಿದ್ದ ಸುಮಾರು 85 ಸಾವಿರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ತೆರಿಗೆ ಪಾವತಿಸುತ್ತಿದ್ದವರೂ ಕೂಡ ಪಡಿತರ ಚೀಟಿ ಪಡೆದುಕೊಂಡಿದ್ದು, ಅಂತವರಿಗೆ ಆಹಾರ ಇಲಾಖೆ ಶಾಕ್ ನೀಡಿದೆ.

ಆದಾಯ ತೆರಿಗೆ ಇಲಾಖೆಯ ನೆರವಿನೊಂದಿಗೆ ಆಹಾರ ಇಲಾಖೆ ಕ್ರಮ ಜರುಗಿಸಿದೆ. 85 ಸಾವಿರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ತೆರಿಗೆ ಪಾವತಿಸುವವರ ಜಿಲ್ಲಾವಾರು ಮಾಹಿತಿ ಪಡೆದು ಆದಾಯ ತೆರಿಗೆ ಮತ್ತು ಪಡಿತರ ಚೀಟಿಯಲ್ಲಿರುವ ಆಧಾರ್ ಸಂಖ್ಯೆಯನ್ನು ಆಧರಿಸಿ ಪಟ್ಟಿ ಸಿದ್ಧಪಡಿಸಿ ಸುಮಾರು 85 ಸಾವಿರ ಹರಹರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿದೆ.

ಸುಳ್ಳು ಮಾಹಿತಿ ಕೊಟ್ಟು ಅನರ್ಹರು ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಪಡೆದುಕೊಂಡಿದ್ದು ಅಂತವರಿಗೆ ಕಾರ್ಡ್ ಮರಳಿಸಲು ಅವಕಾಶ ನೀಡಲಾಗಿತ್ತು. ಆದರೂ ಹೆಚ್ಚಿನವರು ಮರಳಿಸದ ಹಿನ್ನೆಲೆಯಲ್ಲಿ ಆಹಾರ ಇಲಾಖೆ ಪರಿಶೀಲನೆ ನಡೆಸಿದ್ದು, ಈ ಅವಧಿಯಲ್ಲಿ ಪತ್ತೆಯಾದ ಅನರ್ಹರ ಕಾರ್ಡ್ ರದ್ದು ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...