ಯಾದಗಿರಿ: ಜಿಲ್ಲೆಯಲ್ಲಿನ ಅನರ್ಹ ಪಡಿತರ ಚೀಟಿದಾರರು ಮತ್ತು ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು ಸ್ವಯಂಪ್ರೇರಿತವಾಗಿ ಪಡಿತರ ಚೀಟಿಯನ್ನು ಹಿಂದಿರುಗಿಸಲು ಕೊನೆಯ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ತಿಳಿಸಿದ್ದಾರೆ.
ಅಂತ್ಯೋದಯ ಹಾಗೂ ಬಿ.ಪಿ.ಎಲ್. ಪಡಿತರ ಚೀಟಿದಾರರ ಬಗ್ಗೆ ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಹಾಗೂ ಸರಕಾರಿ ನೌಕರರು ಬಗ್ಗೆ ತನಿಖೆ ನಡೆಸುತ್ತಿದ್ದು, ಅನರ್ಹ ಪಡಿತರ ಚೀಟಿದಾರರು ಮತ್ತು ಬಿ.ಪಿ.ಎಲ್ ಕಾರ್ಡ ಹೊಂದಿರುವ ಸರ್ಕಾರಿ ನೌಕರರು ಸ್ವಯಂ ಪ್ರೇರಿತವಾಗಿ ಪಡಿತರ ಚೀಟಿಯನ್ನು ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಗಳಲ್ಲಿ ಹಿಂದಿರುಗಿಸಲು ಸೂಚಿಸಲಾಗಿದೆ.
ಒಂದು ವೇಳೆ ಸರಕಾರದ ಮಾನದಂಡಗಳನ್ನು ಉಲ್ಲಂಘಿಸಿ ಪಡಿತರ ಚೀಟಿ ಹೊಂದಿದ್ದರೆ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.