ಮಂಡ್ಯ: 2000 ರೂಪಾಯಿ ಪರಿಹಾರ ಪಡೆಯಲು ಬಿಪಿಎಲ್ ಮಾನದಂಡ ತೆರವುಗೊಳಿಸಬೇಕೆಂದು ಸಿಐಟಿಯು ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಸಿಐಟಿಯು ಜಿಲ್ಲಾ ಘಟಕದ ಸದಸ್ಯರು ಮಂಡ್ಯದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಂಘಟಿತ ಕಾರ್ಮಿಕರಿಗಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ 2000 ರೂ. ಪರಿಹಾರವನ್ನು ಪಡೆಯಲು ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಎಂಬ ಮಾನದಂಡ ಬದಲಾವಣೆ ಮಾಡಬೇಕು. ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 30ರ ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬಿಪಿಎಲ್ ಮಾನದಂಡ ತೆಗೆದು ಹಾಕಿ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ದೊರಕಿಸಿಕೊಡಬೇಕು. ಜೂನ್ 7 ರೊಳಗೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬೇಕಿದ್ದು, ಇದನ್ನು ಜುಲೈ 30 ರವರೆಗೆ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.