alex Certify ಬಿಪಿಎಲ್ ಕಾರ್ಡ್ ದಾರರಿಗೆ ಪರಿಹಾರ ವಿತರಣೆ, ಸರ್ಕಾರದ ಮಾನದಂಡ ಬದಲಿಸಲು ಒತ್ತಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ದಾರರಿಗೆ ಪರಿಹಾರ ವಿತರಣೆ, ಸರ್ಕಾರದ ಮಾನದಂಡ ಬದಲಿಸಲು ಒತ್ತಾಯ

ಮಂಡ್ಯ: 2000 ರೂಪಾಯಿ ಪರಿಹಾರ ಪಡೆಯಲು ಬಿಪಿಎಲ್ ಮಾನದಂಡ ತೆರವುಗೊಳಿಸಬೇಕೆಂದು ಸಿಐಟಿಯು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

ಸಿಐಟಿಯು ಜಿಲ್ಲಾ ಘಟಕದ ಸದಸ್ಯರು ಮಂಡ್ಯದ ಕಾರ್ಮಿಕ ಇಲಾಖೆ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಸಂಘಟಿತ ಕಾರ್ಮಿಕರಿಗಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ 2000 ರೂ. ಪರಿಹಾರವನ್ನು ಪಡೆಯಲು ಬಿಪಿಎಲ್ ಕಾರ್ಡ್ ದಾರರಿಗೆ ಮಾತ್ರ ಎಂಬ ಮಾನದಂಡ ಬದಲಾವಣೆ ಮಾಡಬೇಕು. ಅರ್ಜಿ ಸಲ್ಲಿಸುವ ಅವಧಿಯನ್ನು ಜುಲೈ 30ರ ವರೆಗೆ ವಿಸ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಪಿಎಲ್ ಮಾನದಂಡ ತೆಗೆದು ಹಾಕಿ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಪರಿಹಾರ ದೊರಕಿಸಿಕೊಡಬೇಕು. ಜೂನ್ 7 ರೊಳಗೆ ಪರಿಹಾರ ಪಡೆಯಲು ಅರ್ಜಿ ಸಲ್ಲಿಸಬೇಕಿದ್ದು, ಇದನ್ನು ಜುಲೈ 30 ರವರೆಗೆ ವಿಸ್ತರಿಸಬೇಕೆಂದು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...