ಬೆಂಗಳೂರು: ಬಿಪಿಎಲ್ ಕಾರ್ಡ್ ವಿಚಾರವಾಗಿ ಆರಂಭವಾಗಿರುವ ಗೊಂದಲಗಳಿಗೆ ಸಂಬಂಧಿಸಿದಂತೆ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಅರ್ಹರ ಬಿಪಿಎಲ್ ಕಾರ್ಡ್ ಗಳನು ಸರ್ಕಾರ ರದ್ದು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಹೆಚ್.ಮುನಿಯಪ್ಪ, ಕೇಂದ್ರ ಸರ್ಕಾರದ ನಿಯಮಗಳ ಅನ್ವಯ ಬಿಪಿಎಲ್ ಕಾರ್ಡ್ ಗಳ ಪರಿಷ್ಕರಣೆ ಮಾಡಲಾಗುತ್ತಿದೆ. ಬಿಪಿಎಲ್ ಗೆ ಅನರ್ಹರು ಎನ್ನುವವರನ್ನು ಎಪಿಎಲ್ ಗೆ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಆದಾಯ ತೆರಿಗೆ ಪಾವತಿ ಮಾಡುವವರು, ಸರ್ಕಾರಿ ನೌಕರರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಬಿಪಿಎಲ್ ಕಾರ್ಡ್ ನೀಡಲಾಗುತ್ತದೆ. ಆದಾಯ ತೆರಿಗೆದಾರರ ಮಾಹಿತಿ ಪಡೆದು ಕಾರ್ಡ್ ರದ್ದು ಮಾಡಲಾಗುವುದು. ಪರಿಶೀಲನೆ ಬಳಿಕ ಅವರನ್ನು ಎಪಿಎಲ್ ಕಾರ್ಡ್ ಗೆ ವರ್ಗಾಯಿಸಲಾಗುವುದು ಎಂದರು.
ಬಿಪಿಎಲ್ ಗೆ ಅರ್ಹರಿದ್ದೂ ಎಪಿಎಲ್ ಗೆ ಸೇರಿದ್ದರೆ ಅಂಥವರಿಗೆ ಬಿಪಿಎಲ್ ಮರುಹಂಚಿಕೆ ಮಾಡುತ್ತೇವೆ. ಸರ್ಕಾರ ಯಾವುದೇ ಅರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.