ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ತಲಾ 150 ರೂಪಾಯಿ ಡಿಬಿಟಿ ಮೂಲಕ ಅವರ ಖಾತೆಗೆ ವಾರದೊಳಗೆ ಜಮಾ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಪಡಿತರ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಕೈಬಿಟ್ಟು ಯಥಾಸ್ಥಿತಿ ಮುಂದುವರಿಕೆಗೆ ಆದೇಶಿಸಿದ್ದು, ರದ್ದಾಗಿದ್ದರೂ ಹಳೆಯ ಬಿಪಿಎಲ್ ಕಾರ್ಡ್ ತೋರಿಸಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ಹೊಸ ಬಿಪಿಎಲ್ ಕಾರ್ಡ್ ಅರ್ಜಿಗಳು ಬಾಕಿ ಉಳಿದಿದ್ದು, ಲಾಗಿನ್ ಪ್ರಕ್ರಿಯೆ ಸರಿಪಡಿಸಿ ಹೊಸದಾಗಿ ಅರ್ಹರಿಗೆ ಬಿಪಿಎಲ್ ಕಾರ್ಡ್ ಹಂಚಿಕೆ ಮಾಡಲಾಗುವುದು. ವಾರದೊಳಗೆ ಡಿಬಿಟಿ ಮೂಲಕ ಅನ್ನ ಭಾಗ್ಯ ಯೋಜನೆ ಹಣ ಬಿಡುಗಡೆ ಮಾಡಲಾಗುವುದು. ಕಳೆದ ಸೆಪ್ಟೆಂಬರ್ ನಿಂದ ಬಾಕಿ ಉಳಿದಿದ್ದು, ಈ ವಾರದೊಳಗೆ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಹೇಳಿದ್ದಾರೆ.