ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಹೊಸ ವರ್ಷದ ಕೊಡುಗೆಯಾಗಿ ಸಿಹಿ ಸುದ್ದಿ ಸಿಗಲಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲಾ ಟೆಸ್ಟ್ ಗಳನ್ನು ಉಚಿತವಾಗಿ ಮಾಡಲಾಗುವುದು ಎನ್ನಲಾಗಿದೆ.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹೆಚ್ಚಿನ ಜನ ಚಿಕಿತ್ಸೆ ಪಡೆಯುತ್ತಿದ್ದು, ಬಿಪಿಎಲ್ ಕಾರ್ಡ್ ದಾರರಿಗೆ ಅನುಕೂಲವಾಗುವಂತೆ ಆ ಕಾರ್ಡ್ ಗಳಿಗೆ ಆಯುಷ್ಮಾನ್ ಕಾರ್ಡ್ ಮಾನ್ಯತೆ ನೀಡಲಾಗುತ್ತದೆ ಎಂದು ಹೇಳಲಾಗಿದೆ.
ಆಯುಷ್ಮಾನ್ ಕಾರ್ಡ್ ಇಲ್ಲದಿದ್ದರೂ ಪಡಿತರ ಚೀಟಿಯಲ್ಲಿ ಹೆಸರು ಹೊಂದಿದವರಿಗೆ ಆರೋಗ್ಯ ಸೌಲಭ್ಯ ಪಡೆಯಲು ಅನುಕೂಲವಾಗುತ್ತದೆ. ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು ಮಹತ್ವದ ಕ್ರಮ ಕೈಗೊಂಡಿದ್ದು, ರೇಷನ್ ಕಾರ್ಡ್ ಹೊಂದಿದ್ದರೆ ಸಾಕು, ಆಯುಷ್ಮಾನ್ ಕಾರ್ಡ್ ಇಲ್ಲದಿದ್ದರೂ ಚಿಕಿತ್ಸೆ ಪಡೆಯಬಹುದು.
ಇನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಎಂ.ಆರ್.ಐ., ರಕ್ತ ಪರೀಕ್ಷೆ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು. ಬಿಪಿಎಲ್, ಎಪಿಎಲ್ ಕಾರ್ಡ್ ಗಳನ್ನೇ ಆಯುಷ್ಮಾನ್ ಕಾರ್ಡ್ ಗಳೆಂದು ಪರಿಗಣಿಸಿ ಖಾಸಗಿ ಆಸ್ಪತ್ರೆಗಳಲ್ಲಿ ಕಾರ್ಡ್ ತೋರಿಸಿ ಯೋಜನೆಯಡಿ ಬರುವ ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.