ಬೆಂಗಳೂರು: ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಜೂನ್ 1 ರಿಂದ ಅವಕಾಶ ಕಲ್ಪಿಸಲು ಆಹಾರ ಇಲಾಖೆ ತೀರ್ಮಾನಿಸಿದೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಕಾರಣದಿಂದ ಹೊಸ ಪಡಿತರ ಚೀಟಿಗಳಿಗೆ ಅರ್ಜಿ ಸಲ್ಲಿಕೆ ಮತ್ತು ಪಡಿತರ ಚೀಟಿ ವಿತರಣೆ ಕಾರ್ಯ ಸ್ಥಗಿತಗೊಂಡಿತ್ತು. ವೆಬ್ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಕೆ ವಿಭಾಗ ಲಾಕ್ ಮಾಡಲಾಗಿತ್ತು. ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ 5 ಗ್ಯಾರಂಟಿ ಯೋಜನೆ ಅನುಷ್ಠಾನದಲ್ಲಿ ಫಲಾನುಭವಿಗಳನ್ನು ಗುರುತಿಸಲು ಬಿಪಿಎಲ್ ಪಡಿತರ ಚೀಟಿ ಮಾನದಂಡವಾಗಿ ನಿಗದಿಪಡಿಸುವ ಸಾಧ್ಯತೆ ಇದ್ದು, ಜನ ಬಿಪಿಎಲ್ ಕಾರ್ಡ್ ಗಾಗಿ ಆಹಾರ ಇಲಾಖೆ ಕಚೇರಿಗಳಿಗೆ ಮುಗಿದಿದ್ದಾರೆ. ಜೂನ್ 1ರಿಂದ ಆದ್ಯತಾ ಕುಟುಂಬಗಳ ಬಡತನ ರೇಖೆಗಿಂತ ಕೆಳಗಿರುವವರು ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿದ ಮತ್ತು ಮಂಜೂರಾದ ಪಡಿತರ ಚೀಟಿಗಳ ವಿತರಣೆ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಲಾಗಿದೆ