ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಫುಡ್ ಕಿಟ್ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್ ನಿಂದಲೇ ನೂತನ ವ್ಯವಸ್ಥೆ ಜಾರಿಗೆ ಬರಲಿದ್ದು. ಅಕ್ಕಿಯ ಜೊತೆಗೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ವಿತರಿಸಲಾಗುವುದು.
ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಜೊತೆಗೆ 170 ರೂ. ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ. ಮುಂದಿನ ತಿಂಗಳಿನಿಂದ 5 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಇತರ ಸಾಮಗ್ರಿ ಒಳಗೊಂಡ ಫುಡ್ ಕಿಟ್ ಗಳನ್ನು ವಿತರಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಆಹಾರ ಇಲಾಖೆ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾದ ಪ್ರಸ್ತಾವನೆಗೆ ಅನುಮೋದನೆ ನೀಡುವ ಸಾಧ್ಯತೆ ಇದೆ.