alex Certify ಅಂತ್ಯೋದಯ ಯೋಜನೆ, BPL ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಜೂ.30 ರೊಳಗೆ ಅನರ್ಹರು ಪಡಿತರ ಚೀಟಿ ಹಿಂದಿರುಗಿಸಲು ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯೋದಯ ಯೋಜನೆ, BPL ಕಾರ್ಡ್ ಹೊಂದಿದವರಿಗೆ ಇಲ್ಲಿದೆ ಮುಖ್ಯ ಮಾಹಿತಿ: ಜೂ.30 ರೊಳಗೆ ಅನರ್ಹರು ಪಡಿತರ ಚೀಟಿ ಹಿಂದಿರುಗಿಸಲು ಅವಕಾಶ

ಬಳ್ಳಾರಿ: ಅನರ್ಹರು ಹೊಂದಿರುವ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತವಾಗಿ ಹಿಂದಿರುಗಿಸಲು ಜೂ.30 ರವರೆಗೆ ಅವಕಾಶ ನೀಡಲಾಗಿದ್ದು, ಅಕ್ರಮವಾಗಿ ಪಡೆದಿರುವ ಪಡಿತರ ಚೀಟಿಗಳನ್ನು ಕೂಡಲೇ ಹಿಂದಿರುಗಿಸಿ. ಇಲ್ಲದಿದ್ದಲ್ಲಿ ಕಾನೂನಿನ ಅನ್ವಯ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ಎಚ್ಚರಿಸಿದ್ದಾರೆ.

ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳ ಪಟ್ಟಿಯನ್ನು ಗಮನಿಸಲಾಗಿದ್ದು, ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹರಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ ಇಲಾಖೆ ಮಾನದಂಡಗಳನ್ನು ಮರೆಮಾಚಿ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕುಂಡು ಬಂದಿದೆ. ಅನರ್ಹರು ಹೊಂದಿರುವ ಪಡಿತರ ಚೀಟಿಗಳನ್ನು ಸ್ವಯಂ ಪ್ರೇರಿತಾಗಿ ಹಿಂದಿರುಗಿಸಲು ಏ.15 ಕೊನೆಯ ದಿನವಾಗಿತ್ತು. ಈಗ ಅದನ್ನು ವಿಸ್ತರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಪಡಿತರ ಚೀಟಿ ಮಾನದಂಡಗಳು:

ಖಾಯಂ ನೌಕರರು, ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸೌಮ್ಯದ ಸಂಸ್ಥೆಗಳು/ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳಲ್ಲಿ ನೌಕರಿಯಲ್ಲಿರುವವರು. ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆಯನ್ನು ಪಾವತಿಸುವ ಕುಟುಂಬಗಳು. ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಗಿಂತ ಹೆಚ್ಚಿನ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವುದು. ನಗರ ಪ್ರದೇಶದಲ್ಲಿ 1.000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು. ಕುಟುಂಬದ ವಾರ್ಷಿಕ ಆದಾಯವು ರೂ 1.20 ಸಾವಿರಕ್ಕಿಂತ ಹೆಚ್ಚು ಇರುವವರು. ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ ಅಂದರೆ ಟ್ರಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವುದು.

ಒಂದೇ ಮನೆಯಲ್ಲಿ ವಾಸವಿದ್ದು, ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವುದು. ಕುಟುಂಬವು ಸದರಿ ವಿಳಾಸದಲ್ಲಿ ವಾಸವಿಲ್ಲದಿರುವುದು. ಮರಣ ಹೊಂದಿರುವ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು/ಪಡಿತರ ಚೀಟಿಯನ್ನು ರದ್ದುಗೊಳಿಸದೇ ಇರುವವರು ಕೂಡಲೇ ತಮ್ಮ ಪಡಿತರ ಚೀಟಿಗಳನ್ನು ಹಿಂದಿರುಗಿಸುವಂತೆ ಅವರು ತಿಳಿಸಿದ್ದಾರೆ.

ಮಾನದಂಡಗಳನ್ನು ಮೀರಿ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂತಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತವಾಗಿ ತಾಲೂಕು ಕಚೇರಿಯ ಆಹಾರ ಶಾಖೆಗೆ ಅಂತ್ಯೋದಯ ಅನ್ನ ಮತ್ತು ಆದ್ಯತಾ (ಬಿಪಿಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿ ಆದ್ಯತೇತರ (ಎಪಿಎಲ್) ಪಡಿತರ ಚೀಟಿಯನ್ನು ಈ ಕಚೇರಿಯಿಂದ ತಕ್ಷಣವೇ ಪಡೆಯತಕ್ಕದ್ದು. ತಪ್ಪಿದಲ್ಲಿ ಸರ್ಕಾರದ ಆದೇಶದ ಅನ್ವಯ ಸಂಬಂಧಪಟ್ಟವರ ವಿರುದ್ದ ಕ್ರಮಕೈಗೊಳ್ಳಲಾಗುತ್ತದೆ.

ಈ ಅವಧಿಯಲ್ಲಿ ಯಾವುದೇ ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತರಾಗಿ ಅಧ್ಯರ್ಪಣೆ ಮಾಡಿದಲ್ಲಿ ಅಂಥವರ ವಿರುದ್ಧ ಯಾವುದೇ ಕಾನೂನು ಕ್ರಮ ಅಥವಾ ದಂಡ ವಸೂಲಿ ಮಾಡಲಾಗುವುದಿಲ್ಲ. ಸಾರ್ವಜನಿಕರು ತಪ್ಪು ಮಾಹಿತಿ ನೀಡಿ ಪಡಿತರ ಚೀಟಿ ಪಡೆದುಕೊಂಡ ಫಲಾನುಭವಿಗಳ ಮಾಹಿತಿಯನ್ನು ಸೂಕ್ತ ದಾಖಲೆ ಸಹಿತ ಆಹಾರ ಶಾಖೆಯಲ್ಲಿ ನೀಡಬಹುದಾಗಿದ್ದು, ಇಂತಹ ದೂರುದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...