ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 21 ಕೆಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್ಗೆ 14 ಕೆಜಿ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 3 ಕೆಜಿ ಅಕ್ಕಿ, ರಾಗಿ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ತಿಳಿಸಿದ್ದಾರೆ.