ಬೆಂಗಳೂರು: ರಾಜ್ಯದ ಎಲ್ಲಾ ಬಿಪಿಎಲ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಜುಲೈ ತಿಂಗಳಲ್ಲಿ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶುಕ್ರವಾರ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಜುಲೈ 1 ರಿಂದ ಜಾರಿಗೆ ಬರುವಂತೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಶನಿವಾರ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ 10,89,992 ಕುಟುಂಬಗಳು, 1,14,96,419 ಬಿಪಿಎಲ್ ಕಾರ್ಡ್ ದಾರರು ಹಾಗೂ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾದ ಬಿಪಿಎಲ್ ಕಾರ್ಡ್ ದಾರರು ಸೇರಿದಂತೆ ಒಟ್ಟಾರೆ 1,31,70,600 ಕುಟುಂಬಗಳಿಗೆ ಜುಲೈ ತಿಂಗಳಿನಿಂದ ಪಡಿತರದಲ್ಲಿ ಪ್ರತಿ ಸದಸ್ಯರಿಗೆ 10 ಕೆಜಿ ಆಹಾರ ಧಾನ್ಯ ನೀಡಲಾಗುವುದು ಎಂದು ಹೇಳಲಾಗಿದೆ.