alex Certify ಅಂತ್ಯೋದಯ, BPL ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಂತ್ಯೋದಯ, BPL ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಹಾಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ 2021 ರ ಆಗಸ್ಟ್ ಮಾಹೆಗೆ ಪಡಿತರ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ.

ಅಂತ್ಯೋದಯ ಮತ್ತು ಬಿ.ಪಿ,ಎಲ್. ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿಯಲ್ಲಿ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆ.ಜಿ ಅಕ್ಕಿ ಮತ್ತು ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ 34 ಕೆ.ಜಿ ಅಕ್ಕಿ ಹಾಗೂ 1 ಕೆ.ಜಿ ಜೋಳ ನೀಡಲಾಗುತ್ತದೆ.

ಬಿ.ಪಿ.ಎಲ್ ಪಡಿತರ ಚೀಟಿದಾರರ ಪ್ರತಿ ಸದಸ್ಯರಿಗೆ 2 ಕೆ.ಜಿ ಅಕ್ಕಿ ಮತ್ತು 3 ಕೆ.ಜಿ ಜೋಳ ಹಾಗೂ ಪ್ರತಿ ಬಿಪಿಎಲ್ ಪಡಿತರ ಚೀಟಿಗೆ 2 ಕೆ.ಜಿ ಗೋಧಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ.

ಆನ್ ಲೈನ್‌ನಲ್ಲಿ ಹೊಸ ಅರ್ಜಿ ಸಲ್ಲಿಸಿದ ಬಿಪಿಎಲ್ ಪಡಿತರ ಚೀಟಿದಾರರಿಗೆ ಉಚಿತ 10 ಕೆಜಿ ಅಕ್ಕಿ ಹಾಗೂ ಎಪಿಎಲ್ ಪ್ರತಿ ಅರ್ಜಿಗೆ ಕೆಜಿಗೆ 15 ರೂ.ದಂತೆ 10 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿದೆ.

ನ್ಯಾಯಬೆಲೆ ಅಂಗಡಿಯವರು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ನ್ಯಾಯ ಬೆಲೆ ಅಂಗಡಿ ತೆರೆದು ಪಡಿತರ ವಸ್ತು ವಿತರಿಸುತ್ತಾರೆ. ಪಡಿತರ ಪಡೆಯಲು ಬರುವ ಪಡಿತರ ಚೀಟಿ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ಆಹಾರ ಧಾನ್ಯ ಪಡೆಯಬೇಕು.

ಕೇಂದ್ರ ಸರ್ಕಾರದ ಗ್ರಾಹಕರ ಮತ್ತು ಆಹಾರ ನಾಗರಿಕ ಸರಬರಾಜು ಮಂತ್ರಾಲಯದ ಆದೇಶದನ್ವಯ ಕಡ್ಡಾಯವಾಗಿ ಓಟಿಪಿ ಮೂಲಕವೇ ಪಡಿತರ ವಿತರಿಸುತ್ತಿರುವುದರಿಂದ ಪಡಿತರ ಚೀಟಿದಾರರು ನೋಂದಾಯಿತ ಮೊಬೈಲ್‌ನ್ನು ನ್ಯಾಯ ಬೆಲೆ ಅಂಗಡಿಯವರಿಗೆ ತೋರಿಸಿ ಪಡಿತರ ಪಡೆದುಕೊಳ್ಳಬಹುದಾಗಿದೆ.

ಯಾವುದೇ ನ್ಯಾಯಬೆಲೆ ಅಂಗಡಿಕಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದಲ್ಲಿ ಮತ್ತು ಇತರೆ ದೂರುಗಳಿಗೆ ನಿಶುಲ್ಕ ದೂರವಾಣಿ ಸಂಖ್ಯೆ 1967ಗೆ ಅಥವಾ ಆಯಾ ತಾಲ್ಲೂಕಿನ ತಹಶೀಲ್ದಾರ ಕಛೇರಿಗೆ ಅಥವಾ ಜಿಲ್ಲೆಯ ಉಪನಿದೇರ್ಶಕರ ಕಛೇರಿಗೆ ದೂರನ್ನು ಸಲ್ಲಿಸಬಹುದಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...