
ರಾಯಚೂರು: ಅರ್ನಹರು ಪಡಿತರ ಚೀಟಿ ಹಿಂತಿರುಗಿಸಲು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ್ ಅವರು ತಿಳಿಸಿದ್ದಾರೆ.
ಆರ್ಥಿಕವಾಗಿ ಸಬಲರು, ಅನರ್ಹರು ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳನ್ನು ಪಡೆದಿದ್ದಲ್ಲಿ ಜಿಲ್ಲೆಯ ಫಲಾನುಭವಿಗಳು ಸ್ವಯಂ ಪ್ರೇರಿತವಾಗಿ ಆಯಾ ತಾಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ವಿಭಾಗಕ್ಕೆ 2021ರ ಜೂನ್ 30 ರೊಳಗೆ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು. ಇಲ್ಲದಿದ್ದಲ್ಲಿ ದಂಡ ವಿಧಿಸಲಾಗುವುದು ಎಂದು ಹೇಳಳಾಗಿದೆ.