ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಅಕ್ಟೋಬರ್ ಮಾಹೆಯಲ್ಲಿ ಬಿಡುಗಡೆಯಾದ ಪಡಿತರ ಆಹಾರ ಧಾನ್ಯವನ್ನು ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ 21 ಕೆ.ಜಿ ಅಕ್ಕಿ ಮತ್ತು ರಾಗಿ 14 ಕೆಜಿ ಪ್ರತಿ ಕಾರ್ಡಿಗೆ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 3ಕೆಜಿ ಅಕ್ಕಿ ಮತ್ತು ಪ್ರತಿ ಸದಸ್ಯರಿಗೆ 2ಕೆಜಿ ರಾಗಿ ಉಚಿತವಾಗಿ ವಿತರಿಸಲಾಗುತ್ತದೆ.
ಪ್ರತಿ ಕೆಜಿ ಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕ ಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿ ವಿತರಿಸಲಾಗುವುದು.
ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದು, ಹಣ ಪಡೆಯಲು ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ತಮ್ಮ ಬ್ಯಾಂಕ್ ಅಥವಾ ಸ್ಥಳೀಯ ಅಹಾರ ನಿರೀಕ್ಷಕರನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದೆಂದು ಜಿಲ್ಲಾ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.