alex Certify ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್, ಅಂತ್ಯೋದಯ ಕಾರ್ಡ್ ಸೇರಿ ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್

ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.

ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆಜಿ ಅಕ್ಕಿ, ಆದ್ಯತಾ ಹಾಗೂ ಬಿಪಿಎಲ್ ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತದೆ. ಪ್ರತಿ ಕೆಜಿಗೆ 15 ರೂ.ರಂತೆ ಒಪ್ಪಿಗೆ ನೀಡಿದ ಎಪಿಎಲ್ ಏಕಸದಸ್ಯ ಪಡಿತರ ಚೀಟಿದಾರರಿಗೆ 5 ಕೆಜಿ, ಎರಡು ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುವುದು.

ಸರ್ಕಾರದ ಗ್ಯಾರಂಟಿ ಯೋಜನೆಯಡಿ 5 ಕೆಜಿ ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದೆಂದು ತಹಶೀಲ್ದಾರ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...