alex Certify BPL, ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL, ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್

ಯಾದಗಿರಿ: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆಯ 29,354 ಪಡಿತರ ಚೀಟಿಗಳಿಗೆ ಎನ್.ಎಫ್.ಎಸ್.ಎ ಅಡಿಯಲ್ಲಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿ ಮತ್ತು 2,35,318 ಬಿಪಿಎಲ್ ಪಡಿತರ ಚೀಟಿಗಳ 8,48,991 ಪ್ರತಿ ಸದಸ್ಯರಿಗೆ 5 ಕೆ.ಜಿ. ಅಕ್ಕಿ ಹಾಗೂ ಓ.ಎಮ್.ಎಸ್.ಎಸ್.(ಡಿ) ಅಡಿಯಲ್ಲಿ ಬಿ.ಪಿ.ಎಲ್. ಪಡಿತರ ಚೀಟಿಗಳಿಗೆ 2 ಕೆ.ಜಿ. ಗೋಧಿಯನ್ನು ಉಚಿತವಾಗಿ ವಿತರಿಸಲು ಬಿಡುಗಡೆ ಮಾಡಲಾಗಿದೆ.

ಡಿಸೆಂಬರ್-2020 ಆಹಾರಧಾನ್ಯ ಪಡೆಯಲು ಇಚ್ಛೆಯನ್ನು ವ್ಯಕ್ತಪಡಿಸಿದ ಆದ್ಯತೇತರ ಪಡಿತರ ಚೀಟಿ ಹೊಂದಿದವರಿಗೆ ಏಕ ಸದಸ್ಯರಿಗೆ ಅಕ್ಕಿ 5 ಕೆಜಿ ಹಾಗೂ ಎರಡು ಮತ್ತು ಹೆಚ್ಚಿನ ಸದಸ್ಯರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆಜಿಗೆ 15 ರೂ. ನೀಡಿ ಆಹಾರಧಾನ್ಯವನ್ನು ಪಡೆಯಬಹುದಾಗಿದೆ.

ಜಿಲ್ಲೆಯ ಆಯ್ದ 399 ನ್ಯಾಯಬೆಲೆ ಅಂಗಡಿಗಳಲ್ಲಿ ಬಿ.ಪಿ.ಎಲ್. ಪಡಿತರ ಚೀಟಿದಾರರ ಕುಟುಂಬದ ಒಬ್ಬ ಸದಸ್ಯರ ಓ.ಟಿ.ಪಿ. ಮುಖಾಂತರ ಅಥವಾ ಬೆರಳಚ್ಚನ್ನು/ಬಯೋಮೆಟ್ರಿಕ್ ಪಡೆದು ಪಡಿತರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ. ಕುಟುಂಬದ ಸದಸ್ಯರಿಗೆ ಲಭ್ಯವಾಗಿರುವ ಅರ್ಹತಾ ಪ್ರಮಾಣವನ್ನು ತಿಳಿದುಕೊಂಡು ಅಕ್ಕಿಯನ್ನು ಪಡೆದುಕೊಳ್ಳಲು ಸೂಚಿಸಲಾಗಿದೆ.

ಅನ್ನಭಾಗ್ಯ ಯೋಜನೆಯಡಿ ಪಡಿತರ ಪಡೆದುಕೊಳ್ಳಲು ಯಾವುದೇ ದೂರು ಇದ್ದಲ್ಲಿ ಜಿಲ್ಲೆಯ ಉಪ ನಿರ್ದೇಶಕರ ಕಚೇರಿಗೆ, ಆಯಾ ತಾಲೂಕಿನ ತಹಸೀಲ್ದಾರ್ ಅಥವಾ ಸಹಾಯವಾಣಿ 1967 ಸಂಖ್ಯೆಗೆ ದೂರನ್ನು ದಾಖಲು ಮಾಡಬಹುದು.

ಪಡಿತರ ಚೀಟಿದಾರರಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ನ್ಯಾಯಬೆಲೆ ಅಂಗಡಿಯಿಂದ ಆಹಾರಧಾನ್ಯವನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...