ದಾವಣಗೆರೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಜೂನ್ ಮಾಹೆಗೆ ಅನ್ವಯವಾಗುವಂತೆ ಪಡಿತರ ಧಾನ್ಯ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 21 ಕೆಜಿ ಅಕ್ಕಿ, ರಾಗಿ ಪ್ರತಿ ಕಾರ್ಡ್‍ಗೆ 14 ಕೆಜಿ, ಆದ್ಯತಾ ಬಿಪಿಎಲ್ ಪಡಿತರ ಚೀಟಿದಾರರಿಗೆ 3 ಕೆಜಿ ಅಕ್ಕಿ, 2 ಕೆಜಿ ರಾಗಿ ಪ್ರತಿ ಸದಸ್ಯರಿಗೆ ಉಚಿತವಾಗಿ ವಿತರಣೆ ಮಾಡಲಾಗುತ್ತದೆ. ಎಪಿಎಲ್ ಸದಸ್ಯರ ಪಡಿತರ ಚೀಟಿಗೆ 5 ಕೆಜಿ ಅಕ್ಕಿ, 2 ಮತ್ತು ಹೆಚ್ಚಿನ ಸದಸ್ಯರನ್ನು ಹೊಂದಿರುವವರಿಗೆ 10 ಕೆಜಿ ಅಕ್ಕಿಯನ್ನು ಪ್ರತಿ ಕೆ.ಜಿ ಗೆ 15 ರೂ.ಗಳ ದರದಲ್ಲಿ ವಿತರಣೆ ಮಾಡಲಾಗುತ್ತದೆ.
ಅಂತರ್ ರಾಜ್ಯ, ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಪಡಿತರ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಉಚಿತವಾಗಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.