ಬೆಂಗಳೂರು: ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ 5 ಕೆಜಿ ಅಕ್ಕಿಯ ಆಗಸ್ಟ್ ತಿಂಗಳ ಎರಡನೇ ಕಂತಿನ ಹಣ ಜಮಾ ಮಾಡಲಾಗಿದೆ.
30 ಜಿಲ್ಲೆಗಳ 86.72 ಲಕ್ಷ ಪಡಿತರ ಚೀಟಿಗಳ 3.03 ಕೋಟಿಗೂ ಅಧಿಕ ಫಲಾನುಭವಿಗಳಿಗೆ 507 ಕೋಟಿ ರೂ. ಪಾವತಿಸಲಾಗಿದೆ. ಕೋಲಾರ ಜಿಲ್ಲೆಯ ಫಲಾನುಭವಿಗಳಿಗೆ ನೇರಹಣ ವರ್ಗಾವಣೆ ಬಾಕಿ ಇದ್ದು, ಮೂರ್ನಾಲ್ಕು ದಿನಗಳಲ್ಲಿ ಟಡಿಬಿಟಿ ಮೂಲಕ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಲಾಗುವುದು.
31 ಜಿಲ್ಲೆಗಳಲ್ಲಿ 1.03 ಕೋಟಿ ಕುಟುಂಬಗಳು ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಹೊಂದಿವೆ. 3,69,36,906 ಫಲಾನುಭವಿಗಳು ಅನ್ನಭಾಗ್ಯ ಯೋಜನೆ ಪ್ರಯೋಜನ ಪಡೆಯುತ್ತಿದ್ದಾರೆ. ಆಗಸ್ಟ್ ತಿಂಗಳಲ್ಲಿ ಸುಮಾರು 605.90 ಕೋಟಿ ರೂ.ಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ ಎಂದು ಹೇಳಲಾಗಿದೆ.